ಉಡುಪಿ: ಜಿಲ್ಲೆಯ ನಿಟ್ಟೂರಿನಲ್ಲಿರುವ ಸೈಲಾಸ್ ಪಿಯು ಕಾಲೇಜು ತನ್ನ ಮೊದಲ ವರ್ಷದಲ್ಲೇ ಶೈಕ್ಷಣಿಕ ಸಾಧನೆ ಮಾಡಿದೆ. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ನೀಡುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ನಜ್ವಾ ಸನಾ 576 ಅಂಕಗಳೊಂದಿಗೆ ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಹಮ್ಮೆ ತಂದಿದ್ದಾರೆ. ವಿದ್ಯಾರ್ಥಿ ಎಥಾನ್ ಮಾರ್ವಿನ್ ಡಿಸೋಜಾ 562 ಅಂಕಗಳೊಂದಿಗೆ ಮತ್ತು ಪ್ರಿಯಾ ಎಸ್ 552 ಅಂಕ, ವಾಣಿಜ್ಯ ವಿಭಾಗದಲ್ಲಿ ಸಹನ್ ಬಾನು 530 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.
ಸೈಲಾಸ್ ಪಿಯು ಕಾಲೇಜಿನ ಆಡಳಿತ ಮಂಡಳಿಯು ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಅವರ ಗಮನಾರ್ಹ ಕಾರ್ಯಕ್ಷಮತೆಯನ್ನು ಶ್ಲಾಘಿಸಿದೆ. ಈ ಅದ್ಭುತ ಫಲಿತಾಂಶಗಳು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಅಚಲ ಪ್ರಯತ್ನ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.


