ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿರುವ ಪೊಲೀಸರು ಅದನ್ನು ವಾರಸುದಾರರಿಗೆ ಹಸ್ತಾಂತರಿಸಿದರು.
ವಿವಿಧ ಕಂಪೆನಿಯ ಒಟ್ಟು ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಇಪ್ಪತ್ತೇಳು ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಕೆಎಸ್ ಪಿ ಆ್ಯಪ್ ಮೂಲಕ ಮೊಬೈಲ್ ಕಳವಾದ ಬಗ್ಗೆ ದೂರುಗಳು ಸ್ವೀಕರಿಸಿದ್ದು ನಂತರ ಪರಿಶೀಲಿಸಿ ಪೊಲೀಸರು ಕಳವಾದ ಮೊಬೈಲ್ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ನಿರ್ದೇಶನದಲ್ಲಿ ವಿವಿಧ ಪೊಲೀಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಈ ಮೊಬೈಲ್ ಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

