ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ ನಾಳೆಯಿಂದ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಲಿದೆ.
ಸಂಜೆ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಮ್ಮಾನ ಕಾರ್ಯಕ್ರಮ ನಡೆಯಲಿದ್ದು ಕಟೀಲು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಕೃಷ್ಣ ಶೆಟ್ಟಿ ಅವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಇಂದು ಬೆಳಿಗ್ಗೆಯಿಂದ ದೇಗುಲದಲ್ಲಿ ವಿವಿಧ ಹೋಮಗಳು, ಕಲಶಾಭಿಷೇಕ, ವಾಸ್ತು ಪೂಜಾ ಬಲಿ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ.

