ಉಡುಪಿ: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಲ್ಲಿ ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲ್ಯಾಂಟ್ ಸ್ಟೋರೆಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುತ್ತದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಪ್ರಿಲ್ ಇಪ್ಪತ್ತೆಂಟರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಡುಪಿ, ಕಾರ್ಕಳ, ಕುಂದಾಪುರ ತಾಲ್ಲೂಕು ಮೀನುಗಾರಿಕೆ ಸಹಾಯಕರ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.

