ಬೆಳ್ತಂಗಡಿ: ಮರಕ್ಕೆ ಬೈಕ್ ಗುದ್ದಿ ಇಬ್ಬರು ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಪುರುಷಗುಡ್ಡೆಯಲ್ಲಿ ನಡೆದಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಮಣ್ ನಿವಾಸಿಗಳಾದ ಪ್ರಶಾಂತ್ ಮತ್ತು ದಿನೇಶ್ ಮೃತ ದುರ್ದೈವಿಗಳಾಗಿದ್ದಾರೆ. ಕಳೆದ ತಡರಾತ್ರಿ ಬೈಕ್ ಸವಾರರು ವೇಗವಾಗಿ ಚಲಾಯಿಸುತ್ತಾ ಬರುತ್ತಿದ್ದರು. ತಿರುವಿನಲ್ಲಿ ರಸ್ತೆ ಕಾಣದೆ ಮರಕ್ಕೆ ಢಿಕ್ಕಿ ಹೊಡೆದಿದ್ದಾರೆ.
ಅತೀ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

