ಉಡುಪಿ: 2025ನೇ ಸಾಲಿನ ಸಿಇಟಿ ಪರೀಕ್ಷೆಯು ಇದೇ ಎಪ್ರಿಲ್ ತಿಂಗಳ 16 ಮತ್ತು 17ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಸಂದರ್ಭ ಅವ್ಯವಹಾರಗಳನ್ನು ತಡೆಗಟ್ಟಲು ಈ ಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚವಂತೆ ಹಾಗೂ ಧ್ವನಿವರ್ಧಕಗಳನ್ನು ಬಳಕೆ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ ನೀಡಿದ್ದಾರೆ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಂಡಳಿಯು ನಿಗದಿಪಡಿಸಿದ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವು ಪರೀಕ್ಷಾ ಅಧಿಕಾರಿ ಹಾಗೂ ಪೊಲೀಸ್ ಗಳಿಗೆ ಅನ್ವಯಿಸುವುದಿಲ್ಲ.


