ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಸೀಫ್, ಅಸ್ಗರ್ ಅಲಿ, ರಶೀಮ್ ಬಂಧಿತ ಆರೋಪಿಗಳು. ಇವರಿಂದ ಒಂದು ಲಕ್ಷ ರೂ ಮೌಲ್ಯದ ಹತ್ತು ಗ್ರಾಂ ಎಂಡಿಎಂಎ, ನಾಲ್ಕು ಸಾವಿರ ರೂ ನಗದು, ನಾಲ್ಕು ಮೊಬೈಲ್ ಫೋನ್ ಗಳು, ಕಾರು ಸಹಿತ ಒಂಭತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಸುತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪಾರ್ಸಲ್ ಮೂಲಕ ಎಂಡಿಎಂಎಯನ್ನು ಸಾಗಾಟ ಮಾಡಿಕೊಂಡು ಬಂದು ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

