ಮಂಗಳೂರು: ಕರಾವಳಿಯ ಮೂಲ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಆದ್ದರಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನೂ ಆಯೋಜನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಗುರುಪುರದಲ್ಲಿ ನಡೆಯುತ್ತಿರುವ ಮೂಳೂರು ಅಡ್ಡೂರು ಜೋಡುಕೆರೆ ಕಂಬಳದ ಸಮಾರೋಪ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿ ಕರಾವಳಿಗರಿಗೆ ಖುಷಿಯ ವಿಚಾರವೊಂದನ್ನು ಹೇಳಿದ್ದಾರೆ.
ಜಾತಿ, ಧರ್ಮ ಮರೆತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಂಬಳವನ್ನು ಇದೇ ರೀತಿ ಮುಂದುವರೆಸಲು ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನೂ ನೀಡಲಿದೆ ಎಂದು ಭರವಸೆ ನೀಡಿದರು.

