ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ೨ ಮತ್ತು ಪರೀಕ್ಷೆ ೩ ಬರೆಯುವ ಅವಕಾಶ ಇರುವುದರಿಂದ ಸಿಇಟಿ ಪರೀಕ್ಷೆ ಬರೆಯಲು ಕೂಡಾ ಇನ್ಮುಂದೆ ಅವಕಾಶ ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಘೋಷಣೆ ಮಾಡಿದೆ.
ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ೧ ಹಾಗೂ ವಾರ್ಷಿಕ ಪರೀಕ್ಷೆ ೨ರ ಪೈಕಿ ಯಾವುದರಲ್ಲಿ ಉತ್ತಮ ಅಂಕ ಬಂದಿರುತ್ತದೆಯೋ ಅದನ್ನು ಪರಿಗಣಿಸಿ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಎಲ್ಲಾ ವಿದ್ಯಾರ್ಥಿಗಳು ಕೂಡಾ ಸಿಇಟಿಗೆ ಹಾಜರಾಗಬಹುದು.

