ಕಾರ್ಕಳ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ವಾಹನವೊಂದನ್ನು ಪತ್ತೆ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಕಲ್ಲು ಸಹಿತ ವಾಹನವನ್ನೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಟಿಪ್ಪರ್ ಚಾಲಕ ಮಹಮ್ಮದ್ ರಫೀಕ್, ಮಣಿಕಂಠನನ್ನು ಪೊಲೀಸರು ವಿಚಾರಿಸಿದಾಗ ಪ್ರಕಾಶ್ ಮತ್ತು ಸತೀಶ್ ಎಂಬ ಮಾಲಕರ ಸೂಚನೆಯಂತೆ ಕಲ್ಲು ತುಂಬಿಸಿತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಶಂಕರಬೆಟ್ಟು ಎಂಬಲ್ಲಿ ಅಲ್ರಮವಾಗಿ ಕಲ್ಲು ಕಳವು ಮತ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಯಾವುದೇ ಲೈಸನ್ಸ್ ಇಲ್ಲದೆ ಕಲ್ಲುಗಳನ್ನು ಲೋಡ್ ಮಾಡುತ್ತಿದ್ದರು.
ಅಕ್ರಮವಾಗಿ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಸಹಿತ ಕಲ್ಲು, ಗೂಡ್ಸ್ ವಾಹಮವನ್ನು ಕೂಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

