ತಮಿಳುನಾಡು: ಇತ್ತೀಚೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಅವರು ರಾಜೀನಾಮೆ ಘೋಷಿಸಿದ್ದರು. ಈ ಬೆನ್ನಲ್ಲೇ ಇದೀಗ ನೈನಾರ್ ನಾಗೇಂದ್ರನ್ ಅವರು ಹೊಸ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶೀಘ್ರದಲ್ಲೇ ರಾಷ್ಟ್ರೀಯ ಮಟ್ಟದ ಪ್ರಮುಖ ಸಂಘಟನಾ ಹುದ್ದೆಯೊಂದನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋಸ್ಟ್ ನಲ್ಲಿ ಅಣ್ಣಾಮಲೈ ಅವರ ಚಾಕಚಕ್ಯತೆ ಮತ್ತು ಕೌಶಲ್ಯವನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಅಣ್ಣಾಮಲೈ ಅವರಿಗೆ ಯಾವ ಹುದ್ದೆ ನೀಡಲಾಗುತ್ತದೆ ಎಂದು ಈ ಬಗ್ಗೆ ಎಪ್ರಿಲ್ ಹದಿನೇಳರ ಒಳಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

