ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ವಿಸ್ತರಿಸಿದ್ದ, ಐನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಅನೇಕ ದಿನಗಳಿಂದ ಇವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ಸಿನಿಮಾ ಮಾತ್ರವಲ್ಲದೆ ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಕೂಡಾ ಅಭಿನಯಿಸಿ ಅನೇಕ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದಾರೆ.
ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರ ನಿಧನಕ್ಕೆ ಕನ್ನಡ ಚಿತ್ರರಂಗ ಸಂತಾಪವನ್ನು ಸೂಚಿಸಿದೆ.

