ಮುಲ್ಕಿ: ಬಾಡಿಗೆಗೆ ಎಂದು ತೆರಳಿದ್ದ ಆಟೋ ಚಾಲಕನೋರ್ವನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆಟೋ ಡ್ರೈವರ್ ಮೊಹಮ್ಮದ್ ಶರೀಫ್ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದನ್ನು ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ ತನ್ನ ಹಳೇ ದ್ವೇಷದ ಕಾರಣ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಕೊನೆಗೂ ಈ ಪ್ರಕರಣವನ್ನು ಭೇಧಿಸಿದ್ದು ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

