ಉಡುಪಿ: ಈ ಬಾರಿ ಎಪ್ರಿಲ್ 30 ಮತ್ತು ಮೇ 1ರಂದು ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ 17ನೇ ಸಾಹಿತ್ಯ ಸಮ್ಮೇಳನ ಅತ್ಯಂತ ಅದ್ಧೂರಿಯಾಗಿ ರಾಜಾಂಗಣದಲ್ಲಿ ನಡೆಯಲಿದ್ದು ಈ ಸಮ್ಮೇಳನದ ಅಧ್ಯಕ್ಷರಾಗಿ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣುಭಟ್ ಅವರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಇವರು ಸರಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿದ್ದಾರೆ.
ಹಲವು ಪ್ರಶಸ್ತಿಗಳಿಗೆ ಭಾಜನರಾಗಿರುವ ಇವರು ಇಪ್ಪತ್ತಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಕಲೆಯನ್ನೂ ಆರಾಧಿಸುವ ಇವರು ಯಕ್ಷಗಾನ ತಾಳಮದ್ದಲೆಯ ಅರ್ಥದಾರಿಯಾಗಿ ಕೂಡಾ ಗುರುತಿಸಿಕೊಂಡಿದ್ದಾರೆ.

