ಮಂಗಳೂರು: ಚಲಿಸುತ್ತಿದ್ದ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದಿದ್ದು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.
ರಸ್ತೆಯ ಬದಿಗೆ ಉರುಳಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನ ಹೊರಭಾಗದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಚಾಲಕನ ಕಂಟ್ರೋಲ್ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ಇದೀಗ ಡ್ರೈವರ್ ನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

