ಧರ್ಮಸ್ಥಳ: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಅರ್ಪಿಸಿದರು.
ಮಂಜುನಾಥ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಇದೇ ಸಂದರ್ಭ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಾಲು ಉದಯಕುಮಾರ್ ಶೆಟ್ಟಿ ಮತ್ತು ಇತರರು ಭಾಗಿಯಾಗಿದ್ದರು.

