ಕರಾವಳಿ ಮೂಲದವರಾಗಿರುವ ನಟಿ ಪೂಜಾ ಹೆಗ್ಡೆ ಅವರು ದ.ಕ ಜಿಲ್ಲೆಯ ದೇಗುಲಗಳಿಗೆ ಆಗಾಗ ಭೇಟಿ ನೀಡುತ್ತಲೇ ಇರುತ್ತಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕನ್ನಡದಲ್ಲಿ ನಟಿಸುವ ಆಸೆ ಇದೆ ಎಂಬ ವಿಚಾರವನ್ನು ಕೂಡಾ ಹಂಚಿಕೊಂಡಿದ್ದರು. ಈಗ ಕನ್ನಡ ಚಿತ್ರರಂಗದ ಸ್ಟಾರ್ ನಟ ಸುದೀಪ್ ಅವರ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಯಾಗಿ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಸುದೀಪ್ ನಟನೆ ಮತ್ತು ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲಾ ರಂಗಾ ಭಾಷಾ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಈ ಬಗ್ಗೆ ಸಿನಿಮಾ ತಂಡ ಯಾವುದೇ ರೀತಿಯ ಅಧಿಕೃತ ಘೋಷಣೆ ಮಾಡಿಲ್ಲ.
ಮನೆಯವರಿಂದಲೂ ಕನ್ನಡ ಸಿನಿಮಾದಲ್ಲಿ ನಟಿಸುವಂತೆ ಒತ್ತಡ ಇದೆ. ಉತ್ತಮ ಕಥೆ ಸಿಕ್ಕರೆ ಖಂಡಿತವಾಗಿಯೂ ಕನ್ನಡ ಸಿನಿಮಾದಲ್ಲಿ ಅಭಿನಯಿಸ್ತೇನೆ ಎಂದು ನಟಿ ಪೂಜಾ ಹೆಗ್ಡೆ ಅವರು ತಿಳಿಸಿದ್ದರು.

