ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೊಳಹಳ್ಳಿ ಗ್ರಾಮದ ನಿವಾಸಿ, ಉಡುಪಿ ಎಚ್ಡಿಎಫ್ಸಿ ಬ್ಯಾಂಕ್ ಉದ್ಯೋಗಿ ಗುರುಪ್ರಸಾದ್(30) ಎಂದು ಗುರುತಿಸಲಾಗಿದೆ.
ಗುರುಪ್ರಸಾದ್ ಎಂಬವರು ಎ.19ರಂದು ರಾತ್ರಿ ವೇಳೆ ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

