ಬೆಳ್ತಂಗಡಿ : ಎರಡು ಕಾರುಗಳ ನಡುವೆ ಸಂಭವಿಸ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡವರನ್ನು ಗೇರುಕಟ್ಟೆಯ ನಿವಾಸಿಗಳಾದ ಕುಸುಮಾವತಿ (75) ಭಾಗ್ಯವತಿ (50)ಮತ್ತು ವೈಭವ್ 23 ಎಂದು ಗುರುತಿಸಲಾಗಿದೆ.
ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರೊಂದು ಗುರುವಾಯನ್ ಕೆರೆದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಲುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

