ಉಡುಪಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಪತ್ರಕರ್ತ ರಾಮ್ ಅಜೆಕಾರ್ ಅವರು ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುತ್ತದೆ. ಪತ್ರಕರ್ತ ರಾಮ್ ಅಜೆಕಾರ್ ಅವರ ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕಿತೇ ಎಂಬ ಶೀರ್ಷಿಕೆಯಡಿಯಲ್ಲಿ ಬರೆದ ಸುದ್ದಿ ಆಯ್ಕೆಯಾಗಿದೆ.
ಈ ಪ್ರಶಸ್ತಿ ನಗದು ಪುರಸ್ಕಾರ, ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಮೇ ಮೂರರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

