ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ರಿಕ್ಕಿ ರೈ ಗನ್ ಮ್ಯಾನ್ ವಿಠಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಿಕ್ಕಿ ರೈ ಮನೆಯ ಭದ್ರತೆಯನ್ನು ನೋಡಿಕೊಳ್ಳುತ್ತಿದ್ದ ಇವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಈಗಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದು ಇದೊಂದು ಫೇಕ್ ಅಟ್ಯಾಕ್ ಎಂದು ಹೇಳಲಾಗುತ್ತಿದೆ.
ವಿಠಲ್ ಬಿಡದಿ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದರು. ಆದ್ದರಿಂದ ಈ ಫಾರ್ಮ್ ಹೌಸನ್ನೂ ತಲಾಶ್ ಮಾಡಿದ ಪೊಲೀಸರು ಗನ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಫೈರಿಂಗ್ ಸ್ಥಳದಲ್ಲಿ ಸಿಕ್ಕ ಗುಂಡಿಗೂ ಮತ್ತು ಮತ್ತು ವಿಠಲ್ ನಲ್ಲಿದ್ದ ಗನ್ ಗೂ ಸಾಮ್ಯತೆ ಕಂಡುಬಂದಿರುವುದರಿಂದ ಅನುಮಾನ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

