ಮೂಡುಬಿದ್ರೆ: ನಿನ್ನೆ ಸುರಿದ ಧಾರಾಕಾರ ಮಳೆಗೆ ಮರಗಳು, ವಿದ್ಯುತ್ ತಂತಿಗಳು ಧರಾಶಾಹಿಯಾಗಿ ಮನೆ ಮತ್ತು ಕಾರು ಸಂಪೂರ್ಣವಾಗಿ ಹಾನಿಯಾಗಿರುವ ಘಟನೆ ಮೂಡುಬಿದ್ರೆಯ ಬೀರಾವು ಎಂಬಲ್ಲಿ ಸಂಭವಿಸಿದೆ.
ಮಳೆಯಿಂದಾಗಿ ಅನೇಕ ಅವಘಡಗಳು ಸಂಭವಿಸಿದ್ದು ಬೀರಾವು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲವು ಕಡೆ ಮನೆಯ ಮೇಲೂ ಹಾನಿಯಾಗಿದ್ದು ವಿದ್ಯುತ್ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡದಿಂದಾಗಿ ಕೆಲ ಗಂಟೆಗಳ ಕಾಲ ಬಂದ್ ಆಗಿತ್ತು.

