ಪುತ್ತೂರು: ಪೊಲೀಸ್ ಇಲಾಖೆಯಲ್ಲಿನ ದಕ್ಷ ಅಧಿಕಾರಿ ಎಂಬ ಬಿರುದಿಗೆ ಪಾತ್ರರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮಣಿಪಾಲ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಇವರು ಪುತ್ತೂರು ಮೂಲದವರಾಗಿದ್ದು ಬಂಟ್ವಾಳ, ಹಿರಿಯಡ್ಕ, ಕೋಟ, ಶೃಂಗೇರಿ ಮತ್ತು ಬೆಂಗಳೂರಿನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಿಸಿಬಿ ವಿಭಾಗದಲ್ಲೂ ಕರ್ತವ್ಯ ನಿರ್ವಹಿಸಿ ಅನುಭವ ಹೊಂದಿರುವ ಇವರು ಐಸಿಸ್ ಉಗ್ರರೊಂದಿಗೆ ಸಂಪರ್ಕ ಹೊಂದಿರುವವರನ್ನು ಮಟ್ಟ ಹಾಕಿ ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಕೋಟೆಕಾರ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ ಅಮೋಘ ಸಾಧನೆಗಾಗಿ ಪ್ರಶಸ್ತಿಗೆ ಕೂಡಾ ಆಯ್ಕೆಯಾಗಿದ್ದರು. ಪ್ರಸ್ತುತ ಇವರು ಉಡುಪಿಯ ಬ್ರಹ್ಮಾವರದ ಚೇರ್ಕಾಡಿ ನಿವಾಸಿಯಾಗಿದ್ದು ಸುರತ್ಕಲ್ ಠಾಣೆಯಿಂದ ಬೀಳ್ಕೊಡುವ ವೇಳೆ ಅತ್ಯಂತ ಆದರದಿಂದ ಗೌರವಿಸಲಾಯಿತು.

