ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಇಪ್ಪತ್ತೇಳು ಮಂದಿಯನ್ನು ಕೊಂದು ಪೈಶಾಚಿಕ ಕೃತ್ಯ ಮೆರೆದಿದ್ದಾರೆ. ಈ ದಾಳಿಯಲ್ಲಿ ಮೃತಪಟ್ಟವರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಹತ್ತು ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಎರಡು ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅಲ್ಲಿಯ ಸಿಎಂ ಅವರು ಘೋಷಣೆ ನೀಡಿದ್ದಾರೆ.
ಪ್ರವಾಸಿಗರ ಸೋಗಿನಲ್ಲಿ ಬಂದು ಮುಸ್ಲಿಮೇತರರನ್ನು ಉಗ್ರರು ಟಾರ್ಗೆಟ್ ಮಾಡಿದ್ದಾರೆ. ಇವರ ದುಷ್ಕೃತ್ಯಕ್ಕೆ ಭಾರತದ ಅನೇಕ ಮಂದಿ ಬಲಿಯಾಗಿದ್ದಾರೆ.

