ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಅವರು ವಯೋಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಒಂಭತ್ತು ವರ್ಷಗಳಿಗೂ ಹೆಚ್ಚು ಕಾಲ ಇವರು ಇಸ್ರೋ, ಬಾಹ್ಯಾಕಾಶ ಇಲಾಖೆಯನ್ನು ಮುನ್ನಡೆಸಿ, ಕರ್ತವ್ಯ ನಿರ್ವಹಿಸಿ ಅನುಭವ ಹೊಂದಿದ್ದರು. ಅಲ್ಲದೆ ಇವರು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕೂಡಾ ಸೇವೆ ಸಲ್ಲಿಸಿದ್ದಾರೆ.
ಇವರ ಪಾರ್ಥೀವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು ಎಂದು ತಿಳಿಸಿದೆ.

