ಗೋಕರ್ಣ: ಸಮುದ್ರ ತೀರದಲ್ಲಿ ಆಟವಾಡುತ್ತಿದ್ದಾಗ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಭರದಲ್ಲಿ ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬೀಚ್ ನಲ್ಲಿ ನಡೆದಿದೆ.
ಸಿಂದುಜ ಮತ್ತು ಕನ್ನಿಮೊಳಿ ನೀರುಪಾಲಾದ ವಿದ್ಯಾರ್ಥಿನಿಯರು ಆಗಿದ್ದಾರೆ. ಇವರು ತಮಿಳುನಾಡಿನ ತಿರುಚಿಯ ವೈದ್ಯಕೀಯ ವಿದ್ಯಾಲಯದಲ್ಲಿ ಕೊನೆಯ ವರ್ಷದ ಪರೀಕ್ಷೆ ಮುಗಿಸಿ ಸುಮಾರು ಇಪ್ಪತ್ತಮೂರು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.
ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದಾಗಲೇ ದೊಡ್ಡ ಅಲೆಯೊಂದು ಬಂಡೆಗೆ ಅಪ್ಪಳಿಸಿ ನಾಲ್ವರು ವಿದ್ಯಾರ್ಥಿನಿಯರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಅದರಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

