ಕಾರ್ಕಳ: ಕಾಡಲ್ಲಿದ್ದ ಮೃಗಗಳು ಇದೀಗ ಜನಸಂಚಾರ ಇರುವ ಪ್ರದೇಶದಲ್ಲೇ ಕಾಣಸಿಗುತ್ತಿರುವುದು ಜನಸಾಮಾನ್ಯರನ್ನು ಆತಂಕಕ್ಕೆ ದೂಡಿದೆ. ಇದೀಗ ಕಾರ್ಕಳದ ವೆಂಕಟರಮಣ ದೇವಸ್ಥಾನದ ಸಮೀಪ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ಕಾರ್ಕಳ ವೆಂಕಟರಮಣ ದೇಗುಲದ ಸಮೀಪ ಶ್ರೀನಿವಾಸ ಕಲ್ಯಾಣ ಮಂಟಪದ ಬಳಿ ನಾರಾಯಣ ಮಲ್ಯರ ಮನೆಯ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಅಲ್ಲಿನ ಸ್ಥಳೀಯರಾದ ಅಭಿಷೇಕ್ ಶೆಣೈ ಎಂಬವರು ಮೊಬೈಲ್ ಕ್ಯಾಮೆರಾದಲ್ಲಿ ವೀಡಿಯೋ ಮಾಡಿದ್ದಾರೆ.
ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಗರ ಭಾಗದಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


