ಉಡುಪಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರು ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಕೋಟಿ ಗೀತಾ ಲೇಖನಯಜ್ಞ ದೀಕ್ಷೆಯನ್ನು ಪಡೆದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಹಾಗೆಯೇ ಈ ಒಂದು ದುಷ್ಕೃತ್ಯದ ವಿರುದ್ಧ ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಷಾ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಇನ್ನು ಪಾಕಿಸ್ತಾನ ಪರ ಹೇಳಿಕೆ ನೀಡಿರುವ ಸಿಎಂ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟಾಂಗ್ ನೀಡಿದರು.

