ಉಡುಪಿ: ಉಡುಪಿಯ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪೂರಕವಾಗುವ ನಿಟ್ಟಿನಲ್ಲಿ ತಾರ್ಕಿಕತೆ, ವಿಮರ್ಶಾತ್ಮಕ ಚಿಂತನೆ, ಅಗತ್ಯ ಕೌಶಲ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ನಡೆಸಲಾಯಿತು.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ. ಬಾಲಕೃಷ್ಣ ಸಿ.ಹೆಚ್ ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಎ.ಹೆಚ್ ಸಾಗರ್ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
ಈ ಅರ್ಥಪೂರ್ಣ ಕಾರ್ಯಾಗಾರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

