ಬ್ರಹ್ಮಾವರ: ಮಹಿಳೆಯೋರ್ವರು ಹೂ ಕೊಯ್ಯುತ್ತಿದ್ದಾಗ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಯುವಕರ ತಂಡವೊಂದು ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ವಾರಂಬಳ್ಳಿ ಗ್ರಾಮದ ಎಪ್ಪತ್ತು ವರ್ಷದ ಪದ್ಮ ಎಂಬವರು ಮನೆಯ ಕಂಪೌಂಡಿನ ಹೊರಗಡೆ ರಸ್ತೆಯಲ್ಲಿ ಹೂವುಗಳನ್ನು ಕೊಯ್ಯುತ್ತಿದ್ದರು. ಈ ಸಂದರ್ಭ ಕಾರಿನಲ್ಲಿ ಬಂದ ಯುವಕರು ಅವರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಕರಿಮಣಿ ಸರ ಎಳೆದು ಎಸ್ಕೇಪ್ ಆಗಿದ್ದಾರೆ.
ಇವರು ನಡೆಸಿದ ಹಲ್ಲೆಯ ಪರಿಣಾಮ ಪದ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

