ಉಡುಪಿ: ಇದೇ ಎಪ್ರಿಲ್ 29ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ನಡೆಯಲಿದೆ. ಬೆಳಿಗ್ಗೆ 8.30ರಿಂದ ಆರಂಭಗೊಂಡು ಸಂಜೆ 5ರವರೆಗೆ ಪಂದ್ಯಾಟ ಇರಲಿದೆ.
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಚೆಸ್ ಪಂದ್ಯಾಟ ನೆರವೇರಲಿದೆ.
ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚೆಸ್ ಪಂದ್ಯಾಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಅನೇಕ ಚೆಸ್ ಆಟಗಾರರು ಈ ಒಂದು ದಿನದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

