ಕಾರ್ಕಳ : ಬೈಕ್ಗೆ ಪಿಕಪ್ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಆನೆಕೆರೆಯಲ್ಲಿ ಏ. 28ರಂದು ಸಂಭವಿಸಿದೆ.
ಸಾಣೂರಿನ ಸುಶಾಂತ್ ಬೈಕಿನಲ್ಲಿ ತಮ್ಮ ಪ್ರಶಾಂತ್ ಎಂಬುವವರನ್ನು ಸಹ ಸವಾರರನ್ನಾಗಿ ಕುಳ್ಳಿರಿಸಿಕೊಂಡು ಕಸಬಾ ಗ್ರಾಮದ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿರುವಾಗ, ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಇಬ್ಬರೂ ಬೈಕ್ ಸಮೇತ ನೆಲಕ್ಕೆ ಬಿದ್ದು ಗಾಯಗೊಂಡಿದ್ದು, ಗಾಯಳು ಗಳು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಅಪಘಾತಕ್ಕೆ ಕಾರಣನಾದ ಪಿಕಪ್ ಗೂಡ್ಸ್ ವಾಹನ ಚಾಲಕನು ವಾಹನವನ್ನು ನಿಲ್ಲಿಸದೆ ಓಡಿಹೋಗಿರುತ್ತಾನೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸುಶಾಂತ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.

