ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು ಐನೂರು ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇಲಾಖೆಯ ಉಪನಿರ್ದೇಶಕಿ ಅನಿತಾ ವಿ ಮಡ್ಲೂರು ಅವರ ನೇತೃತ್ವದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದಲ್ಲಿ ದಾಳಿ ನಡೆಸಲಾಗಿದೆ. ಆ ಸಂದರ್ಭ ಈ ಅಕ್ರಮ ಕೃತ್ಯ ಬೆಳಕಿಗೆ ಬಂದಿದೆ.
ಈ ಉಗ್ರಾಣದಲ್ಲಿ ಬಾಸ್ಮತಿ, ಸೋನಾ ಮಸೂರಿ, ಜೀರಾ ರೈಸ್, ತೌಡು ಅಕ್ಕಿ ಸೇರಿದಂತೆ ವಿವಿಧ ಬ್ರಾಂಡ್ ಗಳ ಅಕ್ಕಿ ಚೀಲಗಳಿದ್ದವು. ಆದರೆ ಯಾವುದೇ ಬ್ರಾಂಡಿಂಗ್ ಇಲ್ಲದ ಬಿಳಿ ಚೀಲಗಳಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು.

