ಕಾಸರಗೋಡು: ಆಟೋ ರಿಕ್ಷಾ ಮತ್ತು ಕಾರು ಪರಸ್ಪರ ಢಿಕ್ಕಿ ಹೊಡೆದು ಅಪಘಾತದ ರಭಸಕ್ಕೆ ರಿಕ್ಷಾ ಚಾಲಕನೋರ್ವ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ಕಾಸರಗೋಡಿನ ಉಪ್ಪಳ ಗೇಟ್ ಸಮೀಪ ನಡೆದಿದೆ.
ಕಾಂಞಂಗಾಡ್ ನ ರಿಕ್ಷಾ ಚಾಲಕ ಮೋಹನ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು ಮತ್ತು ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

