ಉಡುಪಿ: ಮಂಗಳೂರಿನ ಬಜ್ಪೆ ಕಿನ್ನಿಪದವುವಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಉಡುಪಿಯ ಆತ್ರಾಡಿಯಲ್ಲಿ ಮುಸ್ಲಿಂ ಯುವಕನೋರ್ವನ ಹತ್ಯೆಗೆ ಸಂಚು ನಡೆದಿದೆ.
ಸುಶಾಂತ್, ಸಂದೇಶ್ ಪೂಜಾರಿ ಎಂಬುವವರು ಅಬೂಬಕ್ಕರ್ ಎಂಬಾತನ ಕೊಲೆಗೆ ಯತ್ನಿಸಿದ್ದು ವಿಷಯ ತಿಳಿದು ಕೂಡಲೇ ಹಿರಿಯಡ್ಕ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಆಟೋ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಿದ್ದು ಪೊಲೀಸರ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಯ ಪ್ರತೀಕಾರಕ್ಕಾಗಿ ಈ ದುಷ್ಕೃತ್ಯ ಎಸಗಲು ಯತ್ನಿಸಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

