ಚಿಕ್ಕಮಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮಂಗಳೂರು ಬಂದ್ ನಡೆಸಲಾಗಿತ್ತು. ಇದೀಗ ಆ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಅಲ್ದೂರಿನಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲಾಗಿದೆ.
ಚಿಕ್ಕಮಗಳೂರು ಪಟ್ಟಣ ಬಂದ್ ಗೆ ಸೋಮವಾರ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಬಂದ್ ಕಾರಣದಿಂದ ಶನಿವಾರ ಸಂತೆಯನ್ನು ಕೂಡಾ ಸ್ಥಗಿತಗೊಳಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಯಲ್ಲಿದೆ. ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

