ಬೆಂಗಳೂರು: ಸ್ಯಾಂಡಲ್ವುಡ್, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಹಿಂದೆ ʼಯುಐʼ ಚಿತ್ರೀಕರಣ ಸಂದರ್ಭದಲ್ಲೂ ಅವರಿಗೆ ಈ ರೀತಿಯ ಸಮಸ್ಯೆ ಕಂಡು ಬಂದಿತ್ತು ಎನ್ನಲಾಗಿದೆ. ಸದ್ಯ ಉಪ್ಪಿ ಚೇತರಿಸಿಕೊಳ್ಳುತ್ತಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಆಪ್ತ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

