ಉಡುಪಿ: ತಂದೆ ಮೃತಪಟ್ಟ ಹಿನ್ನೆಲೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಹೈಕೋರ್ಟ್ ಅನುಮತಿ ನೀಡಿದ್ದು ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪರೋಲ್ ನಲ್ಲಿ ಉಡುಪಿಗೆ ಕರೆ ತಂದಿದ್ದಾರೆ.
ಇವರ ತಂದೆ ಎಂ ಸುಂದರ್ ಅವರು ಎಪ್ರಿಲ್ ೨೭ರಂದು ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರ, ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಪೆರೋಲ್ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು.
ಅವನ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ಆತನಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಮೇ. ಮೂರರಿಂದ ಹದಿನಾಲ್ಕರವರೆಗೆ ಪೆರೋಲ್ ನೀಡಿದೆ.

