ಉಪ್ಪಿನಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವು-ಕರುಗಳನ್ನು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.
ವಾಹನ ಚಾಲಕ ಜಯಂತ್ ಗೌಡ ಬಂಧಿತ ಆರೋಪಿ. ಇವರು ಬದ್ರುದ್ದೀನ್ ಎಂಬವರಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಪರಿಶೀಲನೆ ಮಾಡಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.

