ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಇತ್ತೀಚೆಗೆ ಬರ್ಬರವಾಗಿ ಹತ್ಯೆಗೈದಿದ್ದು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣ ಅನೇಕ ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ಇದೀಗ ಬಜಪೆ ಅನ್ಯ ಧರ್ಮದ ಕಾನ್ಸ್ಟೇಬಲ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗಂಭೀರ ಆರೋಪ ಮಾಡಿದ್ದಾರೆ.
ಎರಡು ವರ್ಷದ ಹಿಂದೆ ಸುರತ್ಕಲ್ ನಲ್ಲಿ ಹತ್ಯೆಯಾಗಿದ್ದ ಫಾಸಿಲ್ ನ ಸೋದರ ಆದಿಲ್ ಮತ್ತು ಇತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂಬುವುದು ತಿಳಿದುಬಂದಿತ್ತು. ಇದೀಗ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು ಬಜಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ಸುಹಾಸ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ರಶೀದ್ ಸುಹಾಸ್ ಶೆಟ್ಟಿಯನ್ನು ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರ ಇಡಬೇಡ. ನಿನ್ನ ಜೊತೆ ಯಾರೂ ಯುವಕರು ಇರಬಾರದು ಎಂಬ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೆ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸಿ ಆರೋಪಿಗಳಿಗೆ ಹಿಂಟ್ ನೀಡುತ್ತಿದ್ದ ಎಂದು ಹಿಂದೂ ಸಂಘಟನೆ ರಶೀದ್ ಅವರ ಮೇಲೆ ಆರೋಪ ಮಾಡಿದೆ.

