ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರ ಮೇಲೆ ನಡೆದ ದಾಳಿಯನ್ನು ಸಹಿಸಿಕೊಳ್ಳಲಾಗದೆ ಪಾಕ್ ಆಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರು ಮತ್ತು ಅವರ ಗೌಪ್ಯ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿತ್ತು. ಇದೀಗ ಅದನ್ನು ಸಹಿಸಿಕೊಳ್ಳಲಾಗದ ಪಾಕ್ ಮತ್ತೆ ಭಾರತದ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ.
ಪಾಕಿಸ್ತಾನದ ಸೇನೆಯು ಭಾರತದ ಅಡಿಯಲ್ಲಿರುವ ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಹಳ್ಳಿ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದು ಈ ಶೆಲ್ ದಾಳಿಯಿಂದ ಹದಿನೈದು ಮಂದಿ ನಾಗರಿಕರು ಮೃತಪಟ್ಟಿದ್ದು ನಲ್ವತ್ತಮೂರು ಮಂದಿ ಗಾಯಗೊಂಡಿದ್ದಾರೆ.
ಸೋಷಿಯಲ್ ಮೀಡಿಯಾಗಳಲ್ಲಿ ಈ ದಾಳಿಯ ಭಯಾನಕ ದೃಶ್ಯಗಳು ವೈರಲ್ ಆಗುತ್ತಿದ್ದು ಪಾಕಿಸ್ತಾನ ಮತ್ತೆ ಅಮಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.


