ಉಡುಪಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಪಾದಚಾರಿಯೋರ್ವ ಸಾವನ್ನಪ್ಪಿದ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಹೆದ್ದಾರಿ ಬಳಿಯಲ್ಲಿ ನೀರು ಹರಿದು ಹೋಗಲು ಚರಂಡಿಯ ಕೆಲಸ ಮಾಡುತ್ತಿದ್ದ ರವಿ ಕುಮಾರ್ ಸಾವನ್ನಪ್ಪಿದ ದುರ್ದೈವಿ. ಲಾರಿ ಚಾಲಕ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಅತೀ ವೇಗದಿಂದ ಚಲಾಯಿಸಿದ್ದಾನೆ.
ಸ್ಪೀಡ್ ಆಗಿ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರವಿವಕುಮಾರ್ ಎಂಬವರಿಗೆ ಢಿಕ್ಕಿ ಹೊಡೆದಿದೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


