ಇನೋವಾ ಕಾರೊಂದು ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದ ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ ಗೋಪಾಲಿ ಬಳಿ ನಡೆದಿದೆ.
ಬೆಂಗಳೂರಿನ ರಾಮನಗರದ ಎಪ್ಪತ್ತು ಮೂರು ವರ್ಷದ ಯಲ್ಲಿಗಯ್ಯ ಮೃತ ದುರ್ದೈವಿ. ಅವರ ಮಗ ನವೀನ್ ಮತ್ತು ಹೆಂಡತಿ ದೈಯಮ್ಮ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಢಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿದ್ದು ಗಾಯಾಳುಗಳನ್ನು ಕಡಬದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

