ಬಂಟ್ವಾಳ: ಬಜ್ಪೆಯಲ್ಲಿ ಹಂತಕರಿಂದ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರದಪ್ಪ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.
ಈ ಸಂದರ್ಭ ಸುಹಾಸ್ ಮನೆಯವರಿಗೆ ಮೂರು ಲಕ್ಷ ರೂ ಆರ್ಥಿಕ ನೆರವು ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇನ್ಮುಂದೆ ಭವಿಷ್ಯದಲ್ಲೂ ನಿಮ್ಮ ಸಹಾಯಕ್ಕೆ ನಾವಿದ್ದೇವೆ ಎಂದು ಭರವಸೆ ನೀಡಿದರು.
ಇನ್ನು ಈ ವೇಳೆ ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದಾರ್, ಅಧ್ಯಕ್ಷ ಅಜಿತ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.

