ಮುಂಬೈ: ಪಹಲ್ಗಾಮ್ ನಲ್ಲಿ ನಡೆದ ಭೀಕರ ದಾಳಿಯ ನಂತರ ವಿಶ್ವದಲ್ಲಿ ಸಂಘರ್ಷ ಹೆಚ್ಚಾಗಿದೆ. ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾದ ಹಿನ್ನೆಲೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಉಳಿದ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ.
ನಿನ್ನೆ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ನಡೆಯುತ್ತಿದ್ದ ಪಂದ್ಯವನ್ನು ವಾಯುದಾಳಿ ಎಚ್ಚರಿಕೆಯ ಕಾರಣದಿಂದ ಮಧ್ಯದಲ್ಲಿಯೇ ನಿಲ್ಲಿಸಲಾಯಿತು. ಬಳಿಕ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ.
ಆಟಗಾರರ, ಕ್ರೀಡಾ ಅಭಿಮಾನಿಗಳ ಸುರಕ್ಷತೆಯೇ ಪ್ರಮುಖ ಕಾಳಜಿ. ಭದ್ರತಾ ಪರಿಸ್ಥಿತಿ ಹದಗೆಟ್ಟಿರುವುದರಿಂದ ಮುಂದಿನ ಸೂಚನೆ ಬರುವವರೆಗೂ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟೀಕರಣ ನೀಡಿದೆ.

