ನವದೆಹಲಿ: ಭಾರತ- ಪಾಕಿಸ್ತಾನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ದಿನದಿಂದ ದಿನಕ್ಕೆ ಯುದ್ಧ ಭೀತಿ ಹೆಚ್ಚಾಗುತ್ತಲೇ ಇದೆ. ಈ ಸಂದರ್ಭದಲ್ಲಿ ಇದೀಗ ಮತ್ತೆ ಭಾರತ ಸಮರ ಸಾರಿದೆ.
ಸರಣಿ ಸಭೆಯನ್ನು ನಡೆಸಿದ ಪ್ರಧಾನಿ ಮೋದಿಯವರು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಈ ಮುಖೇನ ಭಾರತಕ್ಕೆ ಉಗ್ರರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ಕಳುಹಿಸಿದ್ದಾರೆ.
ಪಾಕಿಸ್ತಾನದಲ್ಲಿ ಈಗಾಗಲೇ ಸೈನಿಕರ ಸಂಖ್ಯೆ ಕುಂಠಿತಗೊಳ್ಳುತ್ತಿದ್ದು ಉಗ್ರರನ್ನು ಬಳಸಿಕೊಂಡು ಪ್ರತಿ ದಾಳಿಯನ್ನು ಮಾಡುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ನಿರ್ಧಾರ ಕೈಗೆತ್ತಿಕೊಳ್ಳಲಾಗಿದೆ.

