ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆಗೈದ ಘಟನೆ ನೆಲ್ಯಾಡಿ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.
ಮಾದೇರಿ ನಿವಾಸಿ ಶರತ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮನೆಯ ಅಂಗಳದಲ್ಲೇ ಈತನಿಗೆ ಚೂರಿ ಇರಿದು ದುಷ್ಕೃತ್ಯ ಮಾಡಲಾಗಿದೆ.
ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎನ್ನಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

