ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ನ ಟಾಯ್ಲೆಟ್ ನ ಗೋಡೆಯಲ್ಲಿ ಪ್ರಚೋದನಕಾರಿ ಬರಹ ಬರೆದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್ ವಿವಾದ ಭುಗಿಲೆದ್ದ ಬೆನ್ನಲ್ಲೇ ಇಲ್ಲಿ ಹಿಂದೂ-ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರವಣಿಗೆ ಬರೆಯಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದಿತ ಬರಹಗಳು ಹೆಚ್ಚಾಗುತ್ತಿದ್ದು ಕೋಮು ಪ್ರಚೋದನೆ ನೀಡುವ ಕುಕೃತ್ಯಗಳು ನಡೆಯುತ್ತಲೇ ಇದೆ. ಈ ಬಗ್ಗೆ ಪೊಲೀಸ್ ಇಲಾಖೆ ವ್ಯವಸ್ಥಿತವಾದ ಕ್ರಮ ಕೈಗೆತ್ತಿಕೊಳ್ಳುತ್ತಿದೆ.

