ಉಡುಪಿ: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಸೀಸನ್ ಮೂರರ ವಿನ್ನರ್ ಮತ್ತು ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ.
ಮೂಲತಃ ಉಡುಪಿ ನಿವಾಸಿಯಾಗಿರುವ ಇವರು ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ.
ಇವರ ನಿಧನ ಊಹಿಸಲಾಗದ ಘಟನೆ ಆಗಿದ್ದು ಸಾವಿನ ಸುದ್ದಿ ಕೇಳಿದವರಂತೂ ಶಾಕ್ ಆಗಿದ್ದಾರೆ. ಪ್ರಸ್ತುತ ಹಿಟ್ಲರ್ ಕಲ್ಯಾಣ ಧಾರವಾಹಿಯಲ್ಲಿ ನಟಿಸುತ್ತಿದ್ದರು. ಇವರ ನಿಧನಕ್ಕೆ ಗೆಳೆಯರು, ಕುಟುಂಬಸ್ಥರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

