ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಭಾರತ ಕಿಡಿಕಾರಿದೆ. ಪಾಕಿಸ್ತಾನದ ಹೈಟೆಕ್ ಜೆಟ್ ಗಳನ್ನು ಭಾರತ ಉರುಳಿಸಿದೆ.
ಭಾರತೀಯ ಸೇನೆಯು ಸದಾ ಅಲರ್ಟ್ ಆಗಿದ್ದು ಈವರೆಗೆ ಪಾಕಿಸ್ತಾನದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿದೆ ಎಂದು ಭಾರತೀಯ ವಾಯು ಕಾರ್ಯಾಚರಣೆಯ ಮಹಾ ನಿರ್ದೇಶಕರು ತಿಳಿಸಿದ್ದಾರೆ.
ನಾವು ಪಾಕಿಸ್ತಾನದ ಪ್ರಮುಖ ಮಿಲಿಟರಿ ಸೊತ್ತುಗಳ ಮೇಲೆ ದಾಳಿ ಮಾಡಿದ್ದೇವೆ. ಅಲ್ಲಿನ ಯುದ್ಧ ವಿಮಾನಗಳು ಭಾರತದ ಗಡಿ ದಾಟದಂತೆ ತಡೆಹಿಡಿಯಲಾಗಿದೆ ಎಂದು ಅವರು ಹೇಳಿದರು.

